ಕುಂದಾಪುರ: ಆಹಾರ ಸಾಮಗ್ರಿಗಳ ಕಿಟ್ ವಿತರಣೆ

Update: 2021-09-09 14:51 GMT

ಕುಂದಾಪುರ, ಸೆ.9: ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಕುಂದಾಪುರ ತಾಲೂಕು ಹಾಗೂ ಬೈಂದೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ಕಮಲಶಿಲೆ ಶ್ರೀಬ್ರಾಹ್ಮೀ ದುರ್ಗಾ ಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸಮುದಾ ಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣೆಯು ಬುಧವಾರ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ತಾಲೂಕಿನ ಪಶು ವೈದ್ಯಾಧಿಕಾರಿ ಸೂರ್ಯನಾರಾಯಣ ಉಪಾಧ್ಯಾಯ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಪಿಡಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿ ಹರೀಶ ಶೆಟ್ಟಿ ಮಾತನಾಡಿ, ವಿಶೇಷ ಚೇತನರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ತಮ್ಮ ಸಂಸ್ಥೆ ಕಳೆದ ಸುಮಾರು 62 ವರ್ಷಗಳಿಂದ ಅತ್ಯಂತ ಹಿಂದುಳಿದ ಗ್ರಾಮೀಣ ಮಟ್ಟದಲ್ಲಿ ಯುವ ವಿಶೇಷ ಚೇತನರನ್ನ ಗುರುತಿಸಿ ಅವರ ಸ್ವಾವಲಂಬಿ ಜೀವನಕ್ಕೆ ಸಹಾಯ ಮಾಡುತ್ತಿದೆ ಎಂದರು.

ಕೊರೋನ ಸಂದರ್ಭದಲ್ಲಿ ವಿಶೇಷ ಚೇತನರಾಗಿ ಗ್ರಾಮೀಣ ಮಟ್ಟದಲ್ಲಿ ಲಸಿಕೆ, ವೈದ್ಯಕೀಯ ಸೌಲಭ್ಯ, ಸಾಂತ್ವನ ಧೈರ್ಯ ತುಂಬಿದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಲ್ಲಾ ಗ್ರಾಪಂಗಳ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಪೀಡಿತರ ಪರವಾಗಿ ತಿಲೋತ್ತಮಾ ನಾಯ್ಕ್, ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ರಾದ ಮಂಜುನಾಥ ಹೆಬ್ಬಾರ್, ಎಪಿಡಿ ಸಂಸ್ಥೆಯ ಪ್ರತಿನಿಧಿ ಆಕಾಶ್ ಶೆಟ್ಟಿ, ಶಿಬಿರಾರ್ಥಿಗಳು, ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯ ಕರ್ತರು ಉಪಸ್ಥಿತರಿದ್ದರು.

ಮಂಜುನಾಥ ಹೆಬ್ಬಾರ್ ಅತಿಥಿಗಳನ್ನು ಸ್ವಾಗತಿಸಿ, ಹರೀಶ ಶೆಟ್ಟಿ ವಂದಿಸಿದರು. ರಾಜು ಜಡ್ಕಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News