ನಿಫಾ ವೈರಸ್ ಭೀತಿ: ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ; ಮುಖ್ಯಮಂತ್ರಿ ಬೊಮ್ಮಾಯಿ

Update: 2021-09-09 16:00 GMT

ಬೆಂಗಳೂರು, ಸೆ.9: ರಾಜ್ಯದಲ್ಲಿ ನಿಫಾ ವೈರಸ್ ಹರಡದಂತೆ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಕೇರಳದಿಂದ ನಮಗೆ ಏನಾದರೂ ಸಮಸ್ಯೆ ಆಗಬಹುದು. ಈ ಸೋಂಕು ಹರಡದಂತೆ ಯಾವ ರೀತಿ ತಡೆಯಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುತ್ತಿದೆ. ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ: ಹೊಸದಿಲ್ಲಿಗೆ ಭೇಟಿ ನೀಡಿದ್ದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಅವರ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗಿಲ್ಲ. ರಾಜ್ಯದಲ್ಲಿ ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸುವಂತೆ ನಮಗೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News