ಮೂರು ರಾಜ್ಯಗಳಿಗೆ ಹೊಸ ರಾಜ್ಯಪಾಲರು
ಹೊಸದಿಲ್ಲಿ: ಪಂಜಾಬ್, ತಮಿಳುನಾಡು ಮತ್ತು ಉತ್ತರಾಖಂಡ ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
ತಮಿಳುನಾಡಿನ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಂಜಾಬ್‌ನ ಹೆಚ್ಚುವರಿ ಹೊಣೆ ಹೊಂದಿದ್ದ ಬಲ್ವಾ ರಿಲಾಲ್ ಪುರೋಹಿತ್ ಇದೀಗ ಪಂಜಾಬ್‌ನ ಕಾಯಂ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಹೇಳಿದೆ.
ನಾಗಾಲ್ಯಾಂಡ್ ರಾಜ್ಯಪಾಲ ಆರ್.ಎನ್.ರವಿ ತಮಿಳುನಾಡಿನ ರಾಜ್ಯಪಾಲರಾಗಿರುತ್ತಾರೆ. ಅಸ್ಸಾಂ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ಅವರು ಮುಂದಿನ ವ್ಯವಸ್ಥೆಯಾಗುವವರೆಗೆ ನಾಗಾಲ್ಯಾಂಡ್‌ನ ಹೆಚ್ಚುವರಿ ಹೊಣೆ ಹೊಂದಿರುತ್ತಾರೆ.
ಉತ್ತರಾಖಂಡ ರಾಜ್ಯಪಾಲರಾದ ಬೇಬಿರಾಣಿ ಮೌರ್ಯ ಅವರ ರಾಜೀನಾಮೆಯನ್ನು ಸ್ವೀಕರಿಸಲಾಗಿದ್ದು, ಲೆಫ್ಟಿನೆಂಟ್ ಗವರ್ನರ್ ಗುರ್ಮೀತ್ ಸಿಂಗ್ ಅವರನ್ನು ಆ ಹುದ್ದೆಗೆ ನೇಮಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.
ಈ ಎಲ್ಲ ಹುದ್ದೆಗಳ ಅಧಿಕಾರಾವಧಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಜಾರಿಗೆ ಬರಲಿದೆ.