×
Ad

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಕೂರ್ಮಾ ರಾವ್

Update: 2021-09-10 12:25 IST

ಮಂಗಳೂರು, ಸೆ.9 : ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ ಕರ್ಫ್ಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ತೆರಳುವ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಉಡುಪಿ ಡಿಸಿ ಸೂಚಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News