ಹಾಸನ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಗಿರೀಶ್

Update: 2021-09-10 12:19 GMT

ಹಾಸನ : ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.

ಆದರೆ ಸಾರ್ವಜನಿಕರು ಸ್ವಯಂ ಜಾಗೃತರಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕಿದೆ. ಮಾಸ್ಕ್ ಧರಿಸಿಯೇ ಓಡಾಟ ನಡೆಸಬೇಕು. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸಂಪೂರ್ಣ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News