×
Ad

ಆಗುಂಬೆ ಘಾಟಿಯ 3ನೇ ತಿರುವಿನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ವಾಹನ ಸಂಚಾರಕ್ಕೆ ಅಡ್ಡಿ

Update: 2021-09-11 13:54 IST

ಹೆಬ್ರಿ, ಸೆ.11: ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಗುಂಬೆ ಘಾಟಿಯ ಮೂರನೇ ತಿರುವಿನಲ್ಲಿ ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನಗಳ ಸಂಚಾರಕ್ಕೆ ತಡೆ ಉಂಟಾಗಿತ್ತು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವು ಉರುಳು ರಸ್ತೆ ಮೇಲೆ ಬಿತ್ತೆನ್ನಲಾಗಿದೆ. ಇದರಿಂದ ಆಗುಂಬೆ- ಹೆಬ್ರಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಪರಿಣಾಮ ಎರಡು ಬದಿಗಳಲ್ಲಿ ಕಿ.ಮೀ.ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿರುವುದು ಕಂಡುಬಂತು.

ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಕಟ್ಟಿಂಗ್ ಮಿಷನ್ ಮೂಲಕ ಮರವನ್ನು ತುಂಡರಿಸಿ ತೆರವುಗೊಳಿಸಿದರು. ಸುಮಾರು 12 ಗಂಟೆಯ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಇದರಿಂದ ಆಗುಂಬೆ- ಹೆಬ್ರಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆಬ್ರಿ ಪೊಲೀಸರು ಸ್ಥಳದಲ್ಲೇ ಇದ್ದು, ಸಂಚಾರ ನಿಯಂತ್ರಣ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News