×
Ad

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ: ಶರ್ಮಿಳಾ

Update: 2021-09-11 20:20 IST

ಉಡುಪಿ, ಸೆ.11: ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ.ಶಾಂತಚಿತ್ತರಾಗಿ ಕುಳಿತು ಯೋಚಿಸಿದರೆ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಆರ್. ಅಭಿಪ್ರಾಯ ಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮುಂಬಯಿಯ ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಉಡುಪಿ ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಆಯೋಜಿಸಲಾದ ‘ಆತ್ಮಹತ್ಯೆ ತಡೆ ದಿನ’ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯಾರೇ ಅದರೂ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತಮ್ಮ ಹತ್ತಿರದವರ ಬಳಿ ಆತ್ಮಹತ್ಯೆ ಆಲೋಚನೆ ಬಗ್ಗೆ ಕೆಲವೊಂದು ಸುಳಿವನ್ನು ನೀಡಿರುತ್ತಾರೆ. ಅಂತಹ ಸಂದರ್ಭದಲ್ಲಿ ಮನೆಯವರು ತಕ್ಷಣ ತಜ್ಞರ ನೆರವನ್ನು ಪಡೆಯುವ ಮೂಲಕ ಅಥವಾ ವ್ಯಕ್ತಿಯೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುವ ಮೂಲಕ ಅವರು ಆತ್ಮಹತ್ಯೆ ಯೋಚನೆಯಿಂದ ದೂರವಾಗುವಂತೆ ಮಾಡಬೇಕು. ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಶಾಂತಚಿತ್ತವಾಗಿ ಕುಳಿತು ಯೋಚಿಸಿದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ.ವಿ.ಭಂಡಾರಿ ವಹಿಸಿದ್ದರು. ಮುಖ್ಯ ಆತಿಥಿಗಳಾಗಿ ಐರ್ಲೆಂಡಿನ ನಿವೃತ್ತ ಮನೋವೈದ್ಯಕೀಯ ಶುಶ್ರೂಷಕರಾದ ಬೆಂಜಮಿನ್ ಭಾಗವಹಿಸಿದ್ದರು. ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಕೆ. ಶೆಟ್ಟಿ ಸ್ವಾಗತಿಸಿದರು. ಸಂಸ್ಥೆಯ ಆಪ್ತಸಮಾಲೋಚಕ ಲೋಹಿತ್ ಕೆ. ವಂದಿಸಿ, ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News