ಭವಾನಿಪುರ ಉಪಚುನಾವಣೆ: ಸೆಪ್ಟೆಂಬರ್ 13 ರಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ನಾಮಪತ್ರ ಸಲ್ಲಿಕೆ
Update: 2021-09-12 15:38 IST
ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡ ಪ್ರಿಯಾಂಕಾ, "ನಾಳೆ ನಾನು ನಾಮಪತ್ರ ಸಲ್ಲಿಸುತ್ತೇನೆ. ಪಶ್ಚಿಮ ಬಂಗಾಳದ ಜನರಿಗೆ ಬದುಕುವ ಹಕ್ಕಿದೆ. ಈ ಹಕ್ಕನ್ನು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಜನರಿಂದ ಕಸಿದುಕೊಳ್ಳುತ್ತಿದೆ. ನಾನು ಬಂಗಾಳದ ಜನರಿಗಾಗಿ ಹೋರಾಡುತ್ತಿದ್ದೇನೆ" ಎಂದು ಹೇಳಿದರು.