ಚಿಂತಾಮಣಿ ಸಮೀಪ ಲಾರಿ-ಜೀಪು ಢಿಕ್ಕಿ:7 ಮಂದಿ ಮೃತ್ಯು,11 ಮಂದಿ ಗಂಭೀರ

Update: 2021-09-12 17:11 GMT

ಚಿಂತಾಮಣಿ :  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮರಿನಾಯಕನಹಳ್ಳಿ ಬಳಿ ಕಾರು-ಸಿಮೆಂಟ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, ಚಿಂತಾಮಣಿಯ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ನೇತೃತ್ವದಲ್ಲಿ ಪೊಲೀಸರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದೆ. 

ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದ್ದು ಜೀಪಿನಲ್ಲಿದ್ದ ಸುಮಾರು ಜನರ ದುರ್ಮರಣ ಆಗಿರುವ ಘಟನೆ ನಡೆದಿದ್ದು, ಇನ್ನೂ ಹಲವಾರು ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆಗೆ ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯವನ್ನು ಮಾಡಿ ಮಾನವೀಯತೆ ಮೆರೆದಿದ್ದಾರೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಚಿಂತಾಮಣಿ ನಗರದ ತಪತೇಶ್ವರ ಕಾಲೋನಿಯ ನಾರಾಯಸ್ವಾಮಿ, ಜೀಪ್ ಚಾಲಕ ರಾಯಲ್ ಪಾಡುವಿನ  ರಮೇಶ, ಆಂದ್ರದ ವೆಂಕಟಲಕ್ಷಮ್ಮ, ಗೋಪಲ್ಲಿ ರತ್ನಮ್ಮ ಎಂದು ತಿಳಿದು ಬಂದಿದ್ದು ಇನ್ನೂ ಇಬ್ಬರ ಹೆಸರು ತಿಳಿದು ಬಂದಿಲ್ಲ, ದುರಂತದ ಬಳಿಕ ಸ್ಥಳಕ್ಕೆ ಚಿಂತಾಮಣಿಯ ಶಾಸಕ ಜೆಕೆ ಕೃಷ್ಣಾರೆಡ್ಡಿ,  ವಿಧಾನಸಭೆ ಮಾಜಿ ಸ್ಪೀಕರ್, ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶಕುಮಾರ್, ಮಾಲೂರು ಶಾಸಕ ನಂಜೇಗೌಡ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಸಹಕಾರಿಯಾದರು. ಇನ್ನೂ ಈ ದುರಂತಕ್ಕೆ ಆರ್ ಟಿ.ಓ  ಅದಿಕಾರಿಗಳೇ ನೇರ ಕಾರಣ ಎಂದು ಶಾಸಕ ಜೆಕೆ ಕೃಷ್ಣಾರೆಡ್ಡಿ  ಆರೋಪ ಮಾಡಿದ್ದಾರೆ.

ಇನ್ನೂ ಅಪಘಾತವಾದ ವಿಕ್ಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 108 ಅಂಬ್ಯೂಲೇನ್ಸ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಗಾಯಾಳುಗಳನ್ನು ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿ ಮಾನವಿಯತೆ ಮೆರೆದಿದ್ದಾರೆ. ಇದೇ ಸಮಯಕ್ಕೆ ಇದೇ ರಸ್ತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅಪಘಾತ ನಡೆದಿರುವುದನ್ನು ಕಂಡು ತಕ್ಷಣ ರಕ್ಷಣಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರಲ್ಲದೆ, ಗಾಯಾಳುಗಳನ್ನು ಶೀಘ್ರವಾಗಿ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ 11 ಮಂದಿಗೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಮತ್ತು ಕೋಲಾರದ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಝೀರೋ ಟ್ರಾಫೀಕ್ ಮೂಲಕ ರವಾನಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಶ್ರೀನಿವಾಸಪುರ, ಚಿಂತಾಮಣಿ, ಬಾಗೇಪಲ್ಲಿ ಹಾಗೂ ಮುಳಬಾಗಿಲು ತಾಲೂಕುಗಳಲ್ಲಿ ಖಾಸಗಿ ವಾಹನಗಳ ಹಾವಳಿ ಮಿತಿಮೀರಿದ್ದು, ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿ ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿರುವುದು ಹಾಗೂ ಗ್ರಾಮೀಣ ರಸ್ತೆಗಳ ಸ್ಥಿತಿಗತಿಗಳೂ ಸಹ ಈ ರೀತಿಯ ಅಪಘಾತಗಳಿಗೆ ಒಂದು ಕಾರಣವಾಗುತ್ತಿರುವುದು ಕಂಡು ಬರುತ್ತಿದೆ. 

ಸಾರಿಗೆ ವಾಹನಗಳ ಮೇಲೆ ನಿಗಾ ಇಡಬೇಕಾದ ವಿಭಾಗೀಯ ಸಾರಿಗೆ ಅಧಿಕಾರಿಗಳ (ಆರ್,ಟಿ,.ಓ) ದಿವ್ಯ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆಗಳು ದಿನೇ ದಿನೇ ಹೆಚ್ಚುತ್ತಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News