ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Update: 2021-09-12 13:57 GMT

ಮಣಿಪಾಲ, ಸೆ.12: ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಇದರ ಆಡಳಿತದ ಅಧೀನಕ್ಕೆ ಒಳಪಟ್ಟ 6 ಕಾಲೇಜುಗಳಲ್ಲಿ 2019-20ನೆ ಸಾಲಿನ ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ರವಿವಾರ ಮಣಿಪಾಲ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಅಧ್ಯಕ್ಷ ಹಾಗೂ ಮಾಹೆ ವಿವಿ ಪ್ರೊಚಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್ ವಹಿಸಿದ್ದರು. ಅಕಾಡೆಮಿ ಆಪ್ ಜನರಲ್ ಎಜ್ಯುಕೇಶನ್ ಉಪಾಧ್ಯಕ್ಷ ಹಾಗೂ ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ನ ಎಕ್ಸಿಕ್ಯುಟಿವ್ ಚೇಯರ್‌ ಮೆನ್ ಸತೀಶ್ ಯು.ಪೈ, ಮಾಹೆ ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ಉಪಸ್ಥಿತರಿದ್ದರು.

ಮಾಹೆ ಉಪಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಕಲಿಕೆ ಯಲ್ಲಿ ತೊಡಗಿಸಿಕೊಳ್ಳಬೇಕು ಹಾಗೂ ಈ ಕಾಲದ ಶಿಕ್ಷಣ ಪದ್ಧತಿಯಲ್ಲಿರುವ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದರು. ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಆಡಳಿತಾಧಿಕಾರಿ ಡಾ.ಎಚ್. ಶಾಂತಾರಾಮ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಂದಾಪುರ ಭಂಡಾರ್ಕರ್ಸ್‌ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಶೆಟ್ಟಿ ರ್ಯಾಂಕ್ ವಿಜೇತರ ಪಟ್ಟಿ ವಾಚಿಸಿದರು. ಡಾ.ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿದರು. ಡಾ.ಸ್ವಾಮಿ ವಂದಿಸಿದರು. ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ ಕೊಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News