ದ.ಕ. ಜಿಲ್ಲೆ: ಕೋವಿಡ್‌ಗೆ ಇಬ್ಬರು ಬಲಿ; 153 ಮಂದಿಗೆ ಕೊರೋನ ಸೋಂಕು

Update: 2021-09-12 16:08 GMT

ಮಂಗಳೂರು, ಸೆ.12: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ 153 ಮಂದಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ 231 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.1.67 ದಾಖಲಾಗಿದೆ.

ಜಿಲ್ಲೆಯಲ್ಲಿನ 1,12,346 ಸೋಂಕಿತರ ಪೈಕಿ 1,09,002 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1612 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1732 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News