ಕೊಟ್ಟಿಗೆಯಲ್ಲಿ ಜಾರಿ ಬಿದ್ದು ಯುವಕ ಮೃತ್ಯು
Update: 2021-09-12 22:03 IST
ಹಿರಿಯಡ್ಕ, ಸೆ.12: ಕೊಟ್ಟಿಗೆಯಲ್ಲಿ ಮಹಿಳೆಯೊಬ್ಬರು ಜಾರಿ ಬಿದ್ದು ಮೃತಪಟ್ಟ ಘಟನೆ ಸೆ.11ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಸಂದೀಪ್ ಬಿ. ಎಂಬವರ ಪತ್ನಿ ಬಿ.ನಾಗಶ್ರೀ ಭಟ್(32) ಎಂದು ಗುರುತಿಸಲಾಗಿದೆ. ಇವರು ಮನೆಯ ಕೊಟ್ಟಿಗೆಯನ್ನು ಸ್ವಚ್ಚಗೊಳಿಸುತ್ತಿ ರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟರು.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.