×
Ad

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ: ಓರ್ವನ ಕೊಲೆ

Update: 2021-09-13 11:14 IST

ರಾಮನಗರ, ಸೆ.13: ಗಣಪತಿ ಮೂರ್ತಿ ವಿಸರ್ಜನೆ ವೇಳೆ‌ ಎರಡು ಗುಂಪುಗಳ‌ ಮಧ್ಯೆ ಘರ್ಷಣೆ ನಡೆದಿದ್ದು, ಈ ವೇಳೆ ವ್ಯಕ್ತಿಯೊಬ್ಬರ ಕೊಲೆಯಾಗಿರುವ ಘಟನೆ ಮಾಗಡಿ ತಾಲೂಕಿನ ಸಾದಮಾರನಹಳ್ಳಿಯಲ್ಲಿ ರವಿವಾರ ರಾತ್ರಿ‌ ನಡೆದಿದೆ.

ಗ್ರಾಮದ ‌ನಿವಾಸಿ ಸುಗಂಧರಾಜು(45) ಹತ್ಯೆಗೀಡಾದವರು. ಇವರನ್ನು ತಂಡವೊಂದು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಇದ್ದು, ಪೊಲೀಸ್ ಕಾವಲು ಹಾಕಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News