ರಾಜ್ಯದಲ್ಲಿ ನೀಟ್ ಗೆ ನಿಷೇಧ ಹೇರುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದ ತಮಿಳುನಾಡು

Update: 2021-09-13 15:29 GMT

ಚೆನ್ನೈ: ಪದವಿಪೂರ್ವ ವೈದ್ಯಕೀಯ ಪದವಿ ಕೋರ್ಸ್‌ಗಳ ಮಸೂದೆ, 2021 (ನೀಟ್ ವಿರೋಧಿ ಮಸೂದೆ) ಯನ್ನು ತಮಿಳುನಾಡು ವಿಧಾನಸಭೆ ಸೋಮವಾರ  ಅಂಗೀಕರಿಸಿತು. ತಮಿಳುನಾಡಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರದ ವೈದ್ಯಕೀಯ ಪ್ರವೇಶ ಪರೀಕ್ಷೆಯಿಂದ ಶಾಶ್ವತ ವಿನಾಯಿತಿ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೋಮವಾರ ಬೆಳಿಗ್ಗೆ ವಿಧಾನಸಭೆಯಲ್ಲಿ ನೀಟ್ ವಿರುದ್ಧದ ಮಸೂದೆಯನ್ನು ಮಂಡಿಸಿದರು.

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 20 ವರ್ಷದ ವಿದ್ಯಾರ್ಥಿ ನೀಟ್‌ಗೆ ಹಾಜರಾಗಲು ಕೆಲವು ಗಂಟೆಗಳ ಮೊದಲು ಆತ್ಮಹತ್ಯೆಯಿಂದ ಸಾವನ್ನಪ್ಪಿದ ನಂತರ ಈ ಮಸೂದೆ ಅಂಗೀಕಾರವಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಹೊರತುಪಡಿಸಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದಂತೆ ಎಲ್ಲಾ ಪಕ್ಷಗಳು ಮಸೂದೆಯ ಪರವಾಗಿ ಮತ ಚಲಾಯಿಸಿದವು.

ಇದಕ್ಕೂ ಮೊದಲು  ಸ್ಟಾಲಿನ್ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ರಾಷ್ಟ್ರೀಯ ಅರ್ಹತೆ ಹಾಗೂ  ಪ್ರವೇಶ ಪರೀಕ್ಷೆ (ನೀಟ್) ವಿರುದ್ಧ ನಿರ್ಣಯವನ್ನು ಮಂಡಿಸಿದರು.

ಇಂದು, ನಾನು ನೀಟ್ ವಿರುದ್ಧ ನಿರ್ಣಯವನ್ನು ಮಂಡಿಸಿದ್ದೇನೆ. ನೀವು (ಎಐಎಡಿಎಂಕೆ) ಕೂಡ ಈ ನಿರ್ಣಯವನ್ನು ತಂದಿದ್ದೀರಿ. ಈ ನಿರ್ಣಯಕ್ಕೆ ತಮ್ಮ ಬೆಂಬಲವನ್ನು ವಿಸ್ತರಿಸಲು ನಾನು ವಿರೋಧ ಪಕ್ಷಗಳನ್ನು ಒತ್ತಾಯಿಸುತ್ತೇನೆ ಎಂದು  ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿಧಾನಸಭೆಯಲ್ಲಿ ಹೇಳಿದರು.

ನೀಟ್ ಅನ್ನು ರದ್ದುಗೊಳಿಸಲಾಗುವುದು ಎಂದು ಡಿಎಂಕೆ ಸರಕಾರ ಹೇಳಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಲಿಲ್ಲ. ನಾವು ಪ್ರತಿಭಟನೆಯಿಂದ ಹೊರ ನಡೆಯಲು ನಿರ್ಧರಿಸಿದ್ದೇವೆ. ನಾವು ನೀಟ್ ನಿರ್ಣಯವನ್ನು ಬೆಂಬಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕ ಇ.ಕೆ.ಪಳನಿಸ್ವಾಮಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News