ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ

Update: 2021-09-13 09:16 GMT

ಅಹ್ಮದಾಬಾದ್:‌ ಪ್ರಥಮ ಬಾರಿಯ ಶಾಸಕ ಭೂಪೇಂದ್ರ ಪಟೇಲ್‌ ಗುಜರಾತ್‌ ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ವಿಜಯ್‌ ರೂಪಾನಿ ನೇತೃತ್ವದ ರಾಜ್ಯ ಸರಕಾರದ ಸಂಪೂರ್ಣ ಕ್ಯಾಬಿನೆಟ್‌ ರಾಜೀನಾಮೆ ನೀಡಿದ ಬಳಿಕ ಇದೀಗ ನೂತನ ಮುಖ್ಯಮಂತ್ರಿಯಾಗಿ ಪಟೇಲ್‌ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ.

ಕೇಂದ್ರ ಗೃಹಸಚಿವ ಅಮಿತ್‌ ಶಾ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಹಿಂದೆ ಆನಂದಿಬೆನ್ ಪಟೇಲ್ ಅವರಿದ್ದ ಘಟ್ಲೋಡಿಯಾ ಕ್ಷೇತ್ರದ ಬಿಜೆಪಿ ಶಾಸಕರಾದ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ ಮತ್ತು ಪರಶೋತ್ತಮ್ ರೂಪಾಲಾ, ಉಪಮುಖ್ಯಮಂತ್ರಿ ನಿತಿನ್ ಪಟೇಲ್ ರವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಊಹಾಪೋಹಗಳ ನಡುವೆ ಅನಿರೀಕ್ಷಿತವೆಂಬಂತೆ ಪಟೇಲ್‌ ರನ್ನು ಆಯ್ಕೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News