ಚಾಮರಾಜನಗರ: ದೇವಾಲಯ ತೆರವಿಗೆ ವಿರೋಧ; ಪ್ರತಿಭಟನೆ

Update: 2021-09-13 12:18 GMT

ಚಾಮರಾಜನಗರ: ಸುಪ್ರೀಂ ಕೋರ್ಟ್ ಆದೇಶವಿದೆ ಎಂದು ಮೈಸೂರು ಜಿಲ್ಲಾಡಳಿತ ಅನಧಿಕೃತ ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿತು.

ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರುಗಳು ರಾಜ್ಯ ಸರ್ಕಾರ ಮತ್ತು ಮೈಸೂರು ಜಿಲ್ಲಾಡಳಿತ ವಿರುದ್ದ ಘೋಷಣೆ ಕೂಗಿದರು.

ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ರಾಜ್ಯಸರ್ಕಾರ, ಮೈಸೂರು ಜಿಲ್ಲಾಧಿಕಾರಿಗಳ ವಿರುದ್ದ ಕಿಡಿ ಕಾರಿದರು.
ಚಾಮರಾಜನಗರದಲ್ಲಿ ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಮೈಸೂರು ಜಿಲ್ಲಾಡಳಿತ ದೇವಾಲಯಗಳ ತೆರವಿಗೆ ಮುಂದಾಗಿರುವ ಕ್ರಮದ ಬಗ್ಗೆ ಆಕ್ರೋಶದ ಕಿಚ್ಚು ಆರಂಭವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News