ಆಸ್ಕರ್ ಫೆರ್ನಾಂಡಿಸ್ ನಿಧನ: ಸೆ.14ರಂದು ಉಡುಪಿ- ಮಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ
ಮಂಗಳೂರು, ಸೆ.13: ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಪ್ರಸಕ್ತ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿ ಈಗಾಗಲೇ ಇರಿಸಲಾಗಿದೆ. ನಾಳೆ (ಮಂಗಳವಾರ) ಬೆಳಗ್ಗೆ 9.30ಕ್ಕೆ ಉಡುಪಿ ಚರ್ಚ್‌ಗೆ ಕೊಂಡೊಯ್ದು ಅಲ್ಲಿ ಪ್ರಾರ್ಥನೆ ನೆರವೇರಿಸಲಾಗುವುದು.
ಮಂಗಳವಾರ 10.30 ಗಂಟೆಯ ಬಳಿಕ ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ರ್ಶನಕ್ಕೆ ಅವಕಾಶ ನೀಡಿ ಶ್ರದ್ಧಾಂಜಲಿ ಅರ್ಪಿಸಲಾಗು ವುದು. ಮಧ್ಯಾಹ್ನ 2.30ಕ್ಕೆ ಉಡುಪಿಯಿಂದ ಹೊರಟು 3.30ರ ವೇಳೆಗೆ ಮಂಗಳೂರು ಕಾಂಗ್ರೆಸ್ ಕಚೇರಿಗೆ ಪಾರ್ಥಿವ ಶರೀರವನ್ನು ತಂದು ಇಲ್ಲಿಯೂ ಶ್ರದ್ಧಾಂಜಲಿ ಅರ್ಪಿಸಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. 5.30ಗಂಟೆಯ ಬಳಿಕ ಪಾರ್ಥಿವ ಶರೀರವನ್ನು ಮತ್ತೆ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗುವುದು. ಮರುದಿನ ಅಂದರೆ ಬುಧವಾರ ಬೆಳಗ್ಗೆ ಮಿಲಾಗ್ರಿಸ್ ಚರ್ಚ್‌ನಲ್ಲಿ 10.30 ಗಂಟೆಗೆ ಪ್ರಾರ್ಥನಾ ವಿಧಿ ವಿಧಾನ ನಡೆಯಲಿದೆ. ಅಲ್ಲಿಂದ ಬೆಂಗಳೂರಿಗೆ ಕರೆದೊಯ್ಯಲಾಗುವುದು. ಅಲ್ಲಿ ಕೆಪಿಸಿಸಿ ಕಚೇರಿಯಲ್ಲಿಯೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗವುದು. ಬಳಿಕ ಬೆಂಗಳೂರಿನ ಸೈಂಟ್ ಪ್ಯಾಟ್ರಿಕ್ ಚರ್ಚ್‌ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕೇಂದ್ರದ ಹಿರಿಯ ನಾಯಕರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರಾದ ವಿನಯ ಕುಮಾರ್ ಸೊರಕೆ ಹಾಗೂ ರಮಾನಾಥ ರೈ ತಿಳಿಸಿದ್ದಾರೆ.