ಸಜ್ಜನ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್: ಡಾ. ರಾಜೇಂದ್ರ ಕುಮಾರ್
Update: 2021-09-13 18:36 IST
ಮಂಗಳೂರು, ಸೆ.13: ಸರಳ, ಸಜ್ಜನ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ರಾಜಕೀಯ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅವಿರತ ಸೇವೆಯನ್ನು ಗೈದಿರುವ ಅಜಾತಶತ್ರುವಾಗಿದ್ದರು. ಕೇಂದ್ರ ಸರಕಾರದ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ ಎಂ.ಎನ್. ರಾಜೇಂದ್ರ ಕುಮಾರ್ ಸಂತಾಪ ಸೂಚಿಸಿದ್ದಾರೆ