×
Ad

ಉಡುಪಿ: ಸೆ.14ರಂದು ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಅಂತಿಮ ದರ್ಶನಕ್ಕೆ ಅವಕಾಶ

Update: 2021-09-13 19:17 IST

ಉಡುಪಿ, ಸೆ.13: ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಬ್ರಹ್ಮಗಿರಿ ಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಮಂಗಳವಾರ ಬೆಳಗ್ಗೆ 9:30ಕ್ಕೆ ಮಂಗಳೂರು ಫಾದರ್ ಮುಲ್ಲರ್ಸ್‌ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಉಡುಪಿಯ ಶೋಕಮಾತಾ ಇಗರ್ಜಿಗೆ ತರಲಾಗುವುದು. 9:30ರಿಂದ 10:30ರವರೆಗೆ ಉಡುಪಿ ಚರ್ಚ್‌ನಲ್ಲಿ ಪ್ರಾರ್ಥನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿರುತ್ತವೆ.

ಬಳಿಕ ಬೆಳಗ್ಗೆ 10:30ರಿಂದ ಅಪರಾಹ್ನ 1:30ರವರೆಗೆ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಅದನ್ನು ಮಂಗಳೂರಿಗೆ ಕೊಂಡೊಯ್ಯಲಾಗುವುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News