ಅಲಿಗಢ: ಸ್ವಾತಂತ್ರ್ಯ ಹೋರಾಟಗಾರನ ಹೆಸರಿನಲ್ಲಿ ಹೊಸ ವಿಶ್ವವಿದ್ಯಾನಿಲಯಕ್ಕೆ ಮಂಗಳವಾರ ಪ್ರಧಾನಿ ಶಂಕು ಸ್ಥಾಪನೆ

Update: 2021-09-13 16:43 GMT

ಅಲಿಗಢ: ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ  ಭೂಮಿ ದಾನ ಮಾಡಿರುವ ರಾಜ ಮಹೇಂದ್ರ ಪ್ರತಾಪ್ ಸಿಂಹ  ಅವರ  ಹೆಸರಿಡುವ ಮೂಲಕ ವಿವಿಗೆ ಮರುನಾಮಕರಣ ಮಾಡುವಂತೆ ಸ್ಥಳೀಯ ಬಿಜೆಪಿ ನಾಯಕನೊಬ್ಬ ಬೇಡಿಕೆ ಇಟ್ಟ ಏಳು ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಅಲಿಗಢದಲ್ಲಿ  ಹೊಸ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜ ಮಹೇಂದ್ರ ಪ್ರತಾಪಸಿಂಹ ರಾಜ್ಯ ವಿಶ್ವವಿದ್ಯಾಲಯದ ಶಂಕು ಸ್ಥಾಪನೆ ನೆರವೇರಿಸಲು ಪ್ರಧಾನಿ ಮೋದಿ ಮಂಗಳವಾರ ನಗರಕ್ಕೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಅಲಿಗಢದ ಜಿಲ್ಲಾ ಕೇಂದ್ರದಿಂದ 40 ಕಿಮೀ ದೂರದಲ್ಲಿರುವ ಲೋಧಾ ಪಟ್ಟಣದಲ್ಲಿ ಕಾರ್ಯಕ್ರಮದ ಸಿದ್ಧತೆಗಳನ್ನುಪರಿಶೀಲಿಸಲು ಸೋಮವಾರ ಸ್ಥಳಕ್ಕೆ ಭೇಟಿ ನೀಡಿದರು.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಲಿಗಢದಲ್ಲಿ ರಾಜ ಮಹೇಂದ್ರ ಪ್ರತಾಪಸಿಂಹ ವಿಶ್ವವಿದ್ಯಾಲಯದ ಶಿಲಾನ್ಯಾಸ ಸಮಾರಂಭದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು

2014 ರಲ್ಲಿ ಸ್ಥಳೀಯ ಬಿಜೆಪಿ ನಾಯಕರು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯವನ್ನು  ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದಾಗ ಜಿಲ್ಲೆಯಲ್ಲಿ ವಿವಾದ ಉಂಟಾಗಿತ್ತು. ರಾಜನು ದಾನ ನೀಡಿದ ಭೂಮಿಯಲ್ಲಿ ಎಎಂಯು ನಿರ್ಮಿಸಲಾಗಿದೆ ಎಂದು ಬಿಜೆಪಿ ನಾಯಕರ ವಾದವಾಗಿತ್ತು.

ಜಿಲ್ಲೆಗೆ ಸೇರಿದ ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರನ ಹೆಸರಿಡಲಿರುವ ಹೊಸ ವಿಶ್ವವಿದ್ಯಾನಿಲಯವು ಈ ಪ್ರದೇಶದಲ್ಲಿ ರಾಜ್ಯ ವಿಶ್ವವಿದ್ಯಾಲಯದ ದೀರ್ಘಕಾಲದ ಬೇಡಿಕೆಯನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅಲಿಗಢ ವಿಭಾಗದ ಎಲ್ಲಾ ಕಾಲೇಜುಗಳು ಮತ್ತು ಕೆಲವು ನೆರೆಹೊರೆಯ ಜಿಲ್ಲೆಗಳು ಇದಕ್ಕೆ ಸಂಯೋಜಿತವಾಗಿರುತ್ತವೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಇತ್ತೀಚೆಗೆ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News