×
Ad

ಮಂಗಳೂರು; ಪತಿಯಿಂದ ಪತ್ನಿ, ಪುತ್ರನಿಗೆ ಹಲ್ಲೆ ಆರೋಪ: ದೂರು

Update: 2021-09-13 21:49 IST

ಮಂಗಳೂರು, ಸೆ.13: ನಗರದ ಸೇರಾವೋ ರಸ್ತೆ ಕಂಪೌಂಡ್‌ನಲ್ಲಿ ಪತಿಯೇ ಪತ್ನಿ ಮತ್ತು ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಪ್ರಕರಣದ ಆರೋಪಿ.

ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾದವರು. ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರಾ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸಿಸುತ್ತಿದ್ದಾರೆ. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಈ ಜಾಗ ನನ್ನದ್ದು, ನೀವಿಬ್ಬರೂ ಇಲ್ಲಿಂದ ಹೋಗಿ ಎಂದು ಹೇಳಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ಸಂದರ್ಭ ಬೇಬಿ ಕುಂದರ್ ಅವರ ಎಡಕೈ ಮಣಿಗಂಟಿಗೆ ಗಾಯವಾಗಿದೆ. ಇದನ್ನು ನೋಡಿ ಮಗ ಅಶ್ವಿನ್ ತಡೆಯಲು ಬಂದಾಗ ಅಶ್ವಿನ್‌ನ ಬಲ ಕೈಗೂ ತಿವಿದಿದ್ದು, ಗಾಯವಾಗಿದೆ. ಬೊಬ್ಬೆ ಕೇಳಿದ ನೆರೆಕರೆಯವರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News