ಪರಿಷತ್‍ನಲ್ಲಿ ಆಸ್ಕರ್ ಫೆರ್ನಾಂಡಿಸ್, ಸಂಚಾರಿ ವಿಜಯ್‍ಗೆ ಸಂತಾಪ
Update: 2021-09-13 22:09 IST
ಬೆಂಗಳೂರು, ಸೆ.13: ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಸಂತಾಪ ಸೂಚಿಸಿದ ನಂತರ ವಿಧಾನ ಪರಿಷತ್ ಕಲಾಪವನ್ನು ಮಂಗಳವಾರ (ಸೆ.14) ಬೆಳಗ್ಗೆ 10.30ಕ್ಕೆ ಮುಂದೂಡಲಾಯಿತು.
ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ ಸೂಚಕ ನಿರ್ಣಯವನ್ನು ಮಂಡಿಸಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಅಗಲಿದ ಗಣ್ಯರ ಸಾಧನೆಗಳನ್ನು ಸ್ಮರಿಸಿದರು.