ಪ್ರತಿ ಗುರುವಾರ ಶಾಸಕರಿಗೆ ಸಿಎಂ ಸಮಯ ಮೀಸಲಿಡಬೇಕು: ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿರ್ಧಾರ
Update: 2021-09-14 00:10 IST
ಬೆಂಗಳೂರು: ಪ್ರತಿ ಗುರುವಾರ ಶಾಸಕರಿಗೆ ಸಿಎಂ ಸಮಯ ಮೀಸಲಿಡಬೇಕು ಮತ್ತು ಶಾಸಕರು ಸಭೆಯಲ್ಲೇ ಚರ್ಚೆ ನಡೆಸಿ ಯಾವುದೇ ಸಮಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂಬ ಹಲವು ವಿಚಾರಗಳ ಕುರಿತ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದರು.
ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ಮಾಡಲಾಗಿದೆ. ಜೈಲುಗಳ ಸುಧಾರಣೆ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಡ್ರಗ್ ಪೆಡ್ಲರ್ಗಳ ವಿರುದ್ಧ ಮತ್ತಷ್ಟು ಕಠಿಣ ಕ್ರಮದ ಬಗ್ಗೆ ನಿರ್ಧಾರ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ಕೆಲ ಹೊಸ ಶಾಸನಗಳನ್ನ ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ. ಪಕ್ಷದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವ ಕುರಿತು ಚರ್ಚಿಸಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಒಳ್ಳೆಯ ಬೆಳವಣಿಗೆಗಳು ಆಗಿವೆ ಎಂದು ಹೇಳಿದ್ದಾರೆ.