×
Ad

ಅಪ್ರಾಪ್ತರನ್ನು ಬಳಸಿಕೊಂಡು ಬಿಕ್ಷಾಟನೆ: ಮಕ್ಕಳನ್ನು ರಕ್ಷಿಸಿದ ಚೈಲ್ಡ್ ಲೈನ್ ಅಧಿಕಾರಿಗಳು

Update: 2021-09-14 14:05 IST

ಪುತ್ತೂರು: ಮಕ್ಕಳಿಂದ ಬಿಕ್ಷಾಟನೆ ನಡೆಸುತ್ತಿರುವ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಪುತ್ತೂರು ನಗರದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಮಕ್ಕಳನ್ನು ಮಂಗಳವಾರ ರಕ್ಷಣೆ ಮಾಡಿ ಮಂಗಳೂರಿನ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಸಂಗೀತ ಎಂಬ ಮಹಿಳೆಯು 8 ಮತ್ತು 6 ವರ್ಷದ ಇಬ್ಬರು ಮಕ್ಕಳನ್ನು ಬಿಕ್ಷಾಟನೆ ನಡೆಸಲು ಬಳಸುತ್ತಿರುವ ಬಗ್ಗೆ ಮಾಹಿತಿ ಅರಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ ಅವರು ಪುತ್ತೂರು ನಗರದ ನೆಲ್ಲಿಕಟ್ಟೆ ಎಂಬಲ್ಲಿರುವ ಖಾಸಗಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಿಕ್ಷಾಟನೆ ನಡೆಸುತ್ತಿರುವ ಮಕ್ಕಳನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರ ಸಹಕಾರದಲ್ಲಿ ಪತ್ತೆ ಹಚ್ಚಿ ರಕ್ಷಣೆ ಮಾಡಿದ್ದಾರೆ. ಈ ಮಕ್ಕಳನ್ನು ಮಂಗಳೂರು ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News