×
Ad

ಎನ್‌ಇಪಿ ವಿರೋಧಿಸಿ ಕ್ಯಾಂಪಸ್‌ ಫ್ರಂಟ್‌ ನಿಂದ ವಿಧಾನಸೌಧ ಮುತ್ತಿಗೆ: ಪೊಲೀಸರಿಂದ ಲಾಠಿಚಾರ್ಜ್‌, ಹಲವರು ವಶಕ್ಕೆ

Update: 2021-09-14 14:56 IST


ಬೆಂಗಳೂರು, ಸೆ.14: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ) ಅನ್ನು ರಾಜ್ಯ ಸರಕಾರ ಜಾರಿಗೊಳಿಸಲು ಮುಂದಾಗಿರುವ ಕ್ರಮ ವಿರೋಧಿಸಿ ವಿಧಾನಸೌಧ ಮುತ್ತಿಗೆ ಚಳುವಳಿ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದ ಮುಂಭಾಗ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಈ ಕೂಡಲೇ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ)ಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಮುಂದಾದರು.
ಈ ವೇಳೆ ವಿದ್ಯಾರ್ಥಿಗಳ ಗುಂಪನ್ನು ತಡೆದ ಪೆÇಲೀಸರು, ವಿಧಾನಸೌಧ ಸುತ್ತಮುತ್ತ ನಿμÉೀಧಾಜ್ಞೆ ಜಾರಿಯಲ್ಲಿದೆ. ಮೆರವಣಿಗೆಯಲ್ಲಿ ಹೋಗಲು ಅವಕಾಶವಿಲ್ಲ ಎಂದರು. ಅದಕ್ಕೆ ಒಪ್ಪದ ವಿದ್ಯಾರ್ಥಿಗಳು, ಮೆರವಣಿಗೆ ನಡೆಸುವುದಾಗಿ ಹೇಳಿ ಮುಂದಕ್ಕೆ ಹೊರಟರು. ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೆÇಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. 

ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೆÇಲೀಸರು, ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದರು. ಕೆಲವರು ಗಾಯಗೊಂಡರು. ಇಷ್ಟಾದರೂ ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತಿದ್ದ ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದರು.

ಇದಕ್ಕೂ ಮುನ್ನ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಮಾತನಾಡಿ, ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದ್ದರು. ಆದರೆ, ಈ ನಿರೀಕ್ಷೆಗೆ ತದ್ವಿರುದ್ಧವಾದ ಅಸಮರ್ಪಕ ಹಾಗೂ ಅವೈಜ್ಞಾನಿಕ ನೀತಿಯು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಲಿದೆ ಎಂದರು.

ಅಲ್ಲದೆ, ಈ ನೀತಿಯ ಕುರಿತು ಸಚಿವ ಸಂಪುಟ ಸಭೆ ಕರೆದು ಲೋಕಸಭೆ, ವಿಧಾನಸಭೆಯಲ್ಲಿ ಚರ್ಚೆಗೆ ಒಳಪಡಿಸದೆ ಹಿಂಬಾಗಿಲಿನ ಮುಖಾಂತರ ಜಾರಿಗೊಳಿಸಿರುವುದರ ದುರುದ್ದೇಶವನ್ನು ಕ್ಯಾಂಪಸ್ ಫ್ರಂಟ್ ಅರಿತಿದೆ. ಈ ನೀತಿಯು ಶಿಕ್ಷಣವನ್ನು ಕೇಂದ್ರೀಕರಿಸುವುದರೊಂದಿಗೆ ಖಾಸಗೀಕರಣಕ್ಕೆ ಒತ್ತು ನೀಡುವ ಹಾಗೂ ಶಿಕ್ಷಣವನ್ನು ಕೇಸರೀಕರಣಗೊಳಿಸುವ ಹುನ್ನಾರ ಹೊಂದಿದೆ ಎಂದು ಗಂಭೀರ ಆರೋಪ ಮಾಡಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News