ಕೇರಳ-ಕರ್ನಾಟಕ ಗಡಿ ಪ್ರವೇಶ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಮಂಗಳೂರು, ಸೆ.14: ಕೋವಿಡ್ ಹಾಗೂ ನಿಫಾ ವೈರಸ್ ಹಿನ್ನೆಲೆಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ಗಡಿ ಪ್ರವೇಶ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ರಾತ್ರಿ 9ರಿಂದ ಮರುದಿನ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಗಡಿ ಪ್ರವೇಶಿಸುವ ಕೇರಳಿಗರು ಆರ್‌ಟಿಸಿಪಿಆರ್ ನೆಗೆಟಿವ್ ವರದಿ ಕಡ್ಡಾಯ ಹಾಜರುಪಡಿಸಬೇಕು. ಉದೋಗಿಗಳು ಹಾಗೂ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಆಗಮಿಸುವುದಿದ್ದರೆ, ಕೋವಿಡ್ ನೆಗೆಟಿವ್ ವರದಿ ಜೊತೆಗೆ ಏಳು ದಿನಗಳ ಕಡ್ಡಾಯ ಕ್ವಾರಂಟೈನ್ ಮಾಡಬೇಕು. ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಇರುವುದಿದ್ದರೆ, 72 ಗಂಟೆಗಳ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು ಎಂದರು.
ಕೇರಳದಿಂದ ಮಂಗಳೂರಿಗೆ ಚಿಕಿತ್ಸೆಗೆ ಆಗಮಿಸುವ ಆ್ಯಂಬುಲೆನ್ಸ್‌ಗಳನ್ನು ಕೂಲಂಕಷ ತಪಾಸಣೆಗೆ ಒಳಪಡಿಸಲಾಗುವುದು. ಇಲ್ಲಿ ಆಸ್ಪತ್ರೆಗೆ ದಾಖಲಾಗುವ ಹೊರ ಜಿಲ್ಲೆಯ ರೋಗಿಗಳ ಬಗ್ಗೆ ಆಯಾ ಜಿಲ್ಲಾಡಳಿತ ಮಾಹಿತಿ ನೀಡುವಂತೆ ವಿನಂತಿಸಲಾಗುವುದು ಎಂದರು.