ಉಡುಪಿ: ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2021-09-14 12:42 GMT

ಉಡುಪಿ, ಸೆ.14: ಉಡುಪಿ ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವರ್ಗದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಆಫ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯು ಅರ್ಜಿ ನಮೂನೆಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ವೌಲಾನಾ ಅಜಾದ್ ಭವನ, ಮಣಿಪಾಲ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ನೆಲ ಮಹಡಿ, ಮಿನಿ ವಿಧಾನಸೌಧ, ತಾಲೂಕು ಕಛೇರಿ ಕಂಪೌಂಡ್, ಕಾರ್ಕಳ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಳೇ ತಾಲೂಕು ಕಛೇರಿ ಹಿಂಭಾಗ, ಕುಂದಾಪುರ ಇಲ್ಲಿ ಸೆ.20ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ, ಉಡುಪಿ (ದೂ.ಸಂ:0820-2574596/0820-2573596) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News