×
Ad

ಮಂಗಳೂರು: ಸೆ.15-17ರವರೆಗೆ ಕನ್ನಡ ವಿಜ್ಞಾನ ಸಮ್ಮೇಳನ

Update: 2021-09-14 18:38 IST

ಮಂಗಳೂರು, ಸೆ.14: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 16ನೇ ಕನ್ನಡ ವಿಜ್ಞಾನ ಸಮ್ಮೇಳನವು ಇದೇ ಸೆ.15ರಿಂದ 17ರವರೆಗೆ ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡಮಿಯ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಸೆ.15ರಂದು ಬೆಳಗ್ಗೆ 10 ಗಂಟೆಗೆ ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಬೆಂಗಳೂರಿನ ಡೆಬೆಲ್ ಡಿಆರ್‌ಡಿಒನ ನಿರ್ದೇಶಕ ಡಾ.ಟಿ.ಎಂ. ಕೊಟ್ರೇಶ್ ಸಮ್ಮೇಳನವನ್ನು ಉದ್ಘಾಟಿಸಲಿರುವರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ. ಸುಬ್ರಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯಅತಿಥಿಯಾಗಿ ಉನ್ನತ ಶಿಕ್ಷಣ ಮತ್ತು ಐಟಿಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವತ್ಥ್ ನಾರಾಯಣ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ಅಧ್ಯಕ್ಷ ಡಾ.ಎಸ್.ಅಯ್ಯಪ್ಪನ್, ಸ್ವದೇಶಿ ವಿಜ್ಞಾನ ಆಂದೋಳನದ ಸ್ಥಾಪಕರು ಮತ್ತು ಪೋಷಕ ಪ್ರೊ.ಕೆ.ಐ. ವಾಸು, ವಿಜ್ಞಾನ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಜಯಂತ ಸಹಸ್ರ ಬುದ್ಧೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News