ಕಾರ್ಮಿಕ ಭವನದ ಕಟ್ಟಡಕ್ಕೆ ಆಸ್ಕರ್ ಫೆರ್ನಾಂಡಿಸ್ ಹೆಸರಿಡಿ: ಮಾಜಿ ಸಚಿವ ಎಚ್.ಕೆ.ಪಾಟೀಲ್ ಮನವಿ

Update: 2021-09-14 13:31 GMT
 ಎಚ್.ಕೆ.ಪಾಟೀಲ್

ಬೆಂಗಳೂರು: ಸೆ. 14: ರಾಜ್ಯಸಭೆ ಹಾಲಿ ಸದಸ್ಯ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಹಾಗೂ ಚಿತ್ರನಟ ಬಿ.ವಿಜಯ್(ಸಂಚಾರಿ ವಿಜಯ್) ಅವರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಸದನದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ್, ಕಾರ್ಮಿಕ ಭವನದ ಕಟ್ಟಡಕ್ಕೆ ಆಸ್ಕರ್ ಫೆರ್ನಾಂಡಿಸ್ ಅವರ ಹೆಸರಿಡುವಂತೆ ಮನವಿ ಮಾಡಿದ್ದಾರೆ. 

ಆಸ್ಕರ್ ಫೆರ್ನಾಂಡಿಸ್ ಅವರು ಕಾರ್ಮಿಕರ ಕಲ್ಯಾಣ ನಿಧಿ(ಸೆಸ್) ಮೊತ್ತವನ್ನು ಹೆಚ್ಚಿಸುವ ಮೂಲಕ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಮಾಡಿದ್ದಾರೆ. ಅಲ್ಲದೆ, ಕಾರ್ಮಿಕರ ಕಲ್ಯಾಣಕ್ಕೆ ಹಲವು ಕಾನೂನು ರೂಪಿಸಿ ಅನುಷ್ಠಾನಕ್ಕೆ ತಂದಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಕಾರ್ಮಿಕ ಭವನದ ಕಟ್ಟಡಕ್ಕೆ ಆಸ್ಕರ್ ಫೆರ್ನಾಂಡಿಸ್ ಅವರ ಹೆಸರಿಡಬೇಕು ಎಂದು ಮುಖ್ಯಮಂತ್ರಿಗಳ ಸ್ಪೀಕರ್ ಅವರ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News