ದ.ಕ.: ಕೋವಿಡ್‌ಗೆ ಐವರು ಬಲಿ; 87 ಮಂದಿಗೆ ಸೋಂಕು ದೃಢ

Update: 2021-09-14 14:50 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಸೆ.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಮಂಗಳವಾರ 87 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಐವರು ಸಾವಿಗೀಡಾಗಿದ್ದರೆ, 110 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯ ಪಾಸಿಟಿವಿಟಿ ದರ ಶೇ.0.88ರಷ್ಟಿದೆ.ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,12,548ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 1,09,349 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1576 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 1623 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News