×
Ad

ಮಂಗಳೂರು ಏರ್‌ಪೋರ್ಟ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ

Update: 2021-09-14 20:49 IST

ಮಂಗಳೂರು, ಸೆ.14: ಆಟಿಕೆ ಅಡುಗೆ ಸಾಮಗ್ರಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಎಂಬಾತ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ. ವಿಮಾನ ನಿಲ್ದಾಣದಲ್ಲಿ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಈತನನ್ನು ತಪಾಸಣೆ ಮಾಡುತ್ತಿದ್ದ ವೇಳೆ ಈತ ತನ್ನ ಬಳಿಯಿದ್ದ 2 ಆಟಿಕೆ ಅಡುಗೆ ಸಾಮಗ್ರಿ ಸೆಟ್‌ನಲ್ಲಿ ಚಿನ್ನ ಅಡಗಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಇದರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ 10,55,580 ಎಂದು ಅಂದಾಜಿಸಲಾಗಿದೆ. ಚಿನ್ನ ಮತ್ತು ಪ್ರಯಾಣಿಕ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ ನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News