ಹುಬ್ಬಳ್ಳಿ-ಧಾರವಾಡಲ್ಲಿ ಮೌಲಾನಾ ಆಝಾದ್ ಮಾದರಿ ಶಾಲೆ ತೆರೆಯಲು ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-09-14 15:34 GMT

ಬೆಂಗಳೂರು, ಸೆ. 14: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮೌಲಾನಾ ಆಝಾದ್ ಮಾದರಿ ಶಾಲೆ ಪ್ರಾರಂಭಿಸುವ ಸಂಬಂಧ ಕಡತವನ್ನು ತರಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಅಬ್ಬಯ್ಯ ಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹೆಚ್ಚಿದ್ದಾರೆಂಬುದು ನನ್ನ ಗಮನಕ್ಕೆ ಬಂದಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು, ಧಾರವಾಡದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಲ್ಲಿಸಿರುವ ಪ್ರಸ್ತಾವವನ್ನು ಪರಿಶೀಲಿಸಲಾಗುವುದು ಎಂದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಅಬ್ಬಯ್ಯ ಪ್ರಸಾದ್ ಅವರು, ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಮಾದರಿ ಶಾಲೆಯನ್ನು ಆರಂಭಿಸಿದರೆ ಕ್ಷೇತ್ರದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News