ತಮಿಳುನಾಡು: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Update: 2021-09-14 17:23 GMT

ಚೆನ್ನೈ, ಸೆ. 14:  ನೀಟ್ ಪರೀಕ್ಷೆಗೆ ಹಾಜರಾದ ಬಳಿಕ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಶರಣಾದ ಘಟನೆ ತಮಿಳುನಾಡಿನ ಅರಿಯಾಲೂರು ಜಿಲ್ಲೆಯಲ್ಲಿ ಸಂಭವಿಸಿದೆ. ತಮಿಳುನಾಡಿನಲ್ಲಿ ನೀಟ್ ಆಕಾಂಕ್ಷಿಗಳು ಸಾವನ್ನಪ್ಪುತ್ತಿರುವುದು ಇದು ಎರಡನೇ ಘಟನೆ. ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭೀತಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಪದವಿ ಕೋರ್ಸ್ಗೆ ಸೇರ್ಪಡೆಯಾಗುವ ಪ್ರವೇಶ ಪರೀಕ್ಷೆ ನೀಟ್ ಅನ್ನು ತಮಿಳುನಾಡು ವಿಧಾನ ಸಭೆ ರದ್ದುಗೊಳಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.

ಪೋಷಕರು ಬೆಂಬಲ ನೀಡಿದರೂ ವಿದ್ಯಾರ್ಥಿನಿ ಸಂತೋಷವಾಗಿರಲಿಲ್ಲ. ಪೋಷಕರು ಸಮೀಪದ ಪಟ್ಟಣಕ್ಕೆ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆಕೆ ಮಂಡಳಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದಾಳೆ. ಆದರೆ, ನೀಟ್ ಪರೀಕ್ಷೆಯ ಬಗ್ಗೆ ಆತಂಕ ಹೊಂದಿದ್ದಳು ಎಂದು ವಿದ್ಯಾರ್ಥಿನಿಯ ಪೋಷಕರು ತಿಳಿಸಿದ್ದಾರೆ.

ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News