ಉಡುಪಿ: ಮರಣ ಪತ್ರ ಬರೆದು ಮಹಿಳೆ ಆತ್ಮಹತ್ಯೆ
Update: 2021-09-14 23:08 IST
ಉಡುಪಿ, ಸೆ.14: ವೈಯಕ್ತಿಕ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.14ರಂದು ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ(48) ಎಂದು ಗುರುತಿಸಲಾಗಿದೆ. ಇವರು ಮರಣ ಪತ್ರ ಬರೆದು ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಇವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗದಲ್ಲಿ ಸಕ್ರಿಯರಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.