ಅಂಗನವಾಡಿ ಕಟ್ಟಡಗಳಲ್ಲಿ ಮೂಲಸೌಕರ್ಯಕ್ಕೆ ಕ್ರಮ: ಸಚಿವ ಹಾಲಪ್ಪ ಆಚಾರ್

Update: 2021-09-14 18:48 GMT

ಬೆಂಗಳೂರು, ಸೆ.14: ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. 

ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ಪ್ರಸನ್ನಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕೇಂದ್ರ ಪುರಸ್ಕøತ ಯೋಜನೆಯಡಿ ಒಟ್ಟು 65,911 ಅಂಗನವಾಡಿ ಕೇಂದ್ರಗಳ ಪೈಕಿ 45,314 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳಲ್ಲಿ, 11,568 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ, 1,081 ಅಂಗನವಾಡಿ ಕೇಂದ್ರಗಳು ಪಂಚಾಯತ್ ರಾಜ್ ಕಟ್ಟಡಗಳಲ್ಲಿ, 2,744 ಸಮುದಾಯ ಭವನಗಳಲ್ಲಿ, 92 ಯುವಕ ಮಂಡಲ, 44 ಯುವತಿ ಮಂಡಲ, 4,194 ಶಾಲಾ ಕಟ್ಟಡಗಳಲ್ಲಿ ಹಾಗೂ 874 ಇತರೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದರು. 

ರಾಜ್ಯ ಯೋಜನೆಯ ನಗರ ಪ್ರದೇಶಗಳಲ್ಲಿ 450 ಅಂಗನವಾಡಿ ಕೇಂದ್ರಗಳ ಪೈಕಿ 3 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡಗಳಲ್ಲಿ, 370 ಬಾಡಿಗೆ ಕಟ್ಟಡಗಳಲ್ಲಿ, 8 ಬಿಬಿಎಂಪಿ ಕಟ್ಟಡಗಳಲ್ಲಿ, 19 ಸಮುದಾಯ ಭವನಗಳಲ್ಲಿ, 2 ಕೊಳಚೆ ನಿರ್ಮೂಲನಾ ಮಂಡಳಿ ಕಟ್ಟಡದಲ್ಲಿ, 26 ಶಾಲಾ ಕಟ್ಟಡಗಳಲ್ಲಿ, 1 ಬಿಡಬ್ಲ್ಯೂಎಸ್‍ಎಸ್‍ಬಿ ಕಟ್ಟಡದಲ್ಲಿ ಹಾಗೂ 21 ಇತರೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸತ್ತಿವೆ ಎಂದರು.

ರಾಜ್ಯದಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದ್ದು, ಮೂಲಸೌಕರ್ಯ ಹೊಂದಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಕೂಡಲೇ ಅಗತ್ಯ ಮೂಲಸೌಕರ್ಯ ಕಲ್ಪಿಸುವ ವ್ಯವಸ್ಥೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News