ನಿಫಾ ಆತಂಕಿತ ಯುವಕನ ಪರೀಕ್ಷಾ ವರದಿ ನೆಗೆಟಿವ್: ದ.ಕ. ಡಿಎಚ್ಒ

Update: 2021-09-15 03:36 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಸೆ.15: ಮಾರಣಾಂತಿಕ ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನೋರ್ವನ ವರದಿ ಬಂದಿದ್ದು, ಅವರು ಸೋಂಕಿಗೆ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕಾರವಾರ ಮೂಲದ ಈ ಯುವಕ ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಲ್ಯಾಬ್​ವೊಂದರಲ್ಲಿ ಮೈಕ್ರೋ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಈ ವ್ಯಕ್ತಿಗೆ ಜ್ವರ, ಹೃದಯ ಬಡಿತದಲ್ಲಿ ಏರಿಳಿತ ಹಾಗೂ ತಲೆನೋವು ಕಂಡು ಬಂದ ಹಿನ್ನೆಲೆಯಲ್ಲಿ ನಿಫಾದ ಲಕ್ಷಣ ಇರಬಹುದು ಎಂಬ ಶಂಕೆಯಲ್ಲಿ ಕಾರವಾರದಲ್ಲಿ ಆಸ್ರತ್ರೆಗೆ ಖುದ್ದು ದಾಖಲಾಗಿದ್ದರು. ಬಳಿಕ ಅಲ್ಲಿಂದ ಮಣಿಪಾಲ ಆಸ್ಪತ್ರೆ, ಸದ್ಯ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಬೆಂಗಳೂರಿ ನಿಂದ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಅದರ ಇದೀಗ ಬಂದಿದ್ದು, ಈ ಮಾರಣಾಂತಿಕ ಸೋಂಕಿನ ಆತಂಕ ದೂರವಾಗಿದೆ ಎಂದು ಡಿಎಚ್ ಒ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News