ಎನ್.ಇ.ಪಿ. ಬಗ್ಗೆ ಮುಕ್ತ ಚರ್ಚೆಗೆ ಸರಕಾರ ಸಿದ್ಧ: ಸಿಎಂ ಬೊಮ್ಮಾಯಿ

Update: 2021-09-15 08:03 GMT

ಬೆಂಗಳೂರು, ಸೆ.15: ರಾಷ್ಟ್ರೀಯ ಶಿಕ್ಷಣ ನೀತಿ(ಎನ್.ಇ.ಪಿ.) ಬಗ್ಗೆ ಯಾರೂ ಕೂಡಾ ಆತಂಕಿತರಾಗಬೇಕಾದ ಆವಶ್ಯಕತೆ ಇಲ್ಲ. ಈ ನೀತಿ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂಜಿನಿಯರ್ ಗಳ ದಿನಾಚರಣೆ ಅಂಗವಾಗಿ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

  ಎನ್.ಇ.ಪಿ.ಯಲ್ಲಿ ಕ್ರಾಂತಿಕಾರಿ ಬದಲಾವಣಗಳಿವೆ. ಪ್ರಸಕ್ತ ಕಾಲಕ್ಕೆ ಅಗತ್ಯವಾದ ಶಿಕ್ಷಣ ನೀಡಿ ಯುವಜನತೆಗೆ ಉತ್ತಮ ಭವಿಷ್ಯ ರೂಪಿಸುವ ಸದುದ್ದೇಶವನ್ನು ಇದು ಹೊಂದಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಗವುದು. ಅದಲ್ಲದೆ ಈ ನೀತಿ ಬಗ್ಗೆ ಈಗಾಗಲೇ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ಈ ಬಗ್ಗೆ ಇನ್ನಷ್ಟು ಚರ್ಚೆಗೆ ಸರಕಾರ ಸಿದ್ಧವಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News