ಎರಡು ತಿಂಗಳಲ್ಲಿ ಕಸಾಪ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Update: 2021-09-15 12:50 GMT

ಧಾರವಾಡ, ಸೆ.15: ಎರಡು ತಿಂಗಳೊಳಗೆ ಕನ್ನಡ ಸಾಹಿತ್ಯ ಪರಿಷತ್(ಕಸಾಪ) ಪದಾಧಿಕಾರಿಗಳ ಚುನಾವಣೆಯನ್ನು ನಡೆಸುವಂತೆ ಧಾರವಾಡ ಹೈಕೋರ್ಟ್ ಪೀಠ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. 

ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. 

2021ರ ಮೇ 9ರಂದು ನಡೆಯಬೇಕಿದ್ದ ಕಸಾಪ ಚುನಾವಣೆಯನ್ನು ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಕೋವಿಡ್ ಸೋಂಕು ತಗ್ಗಿದ್ದು, ಮೂರು ಪಾಲಿಕೆ ಚುನಾವಣೆಗಳೂ ನಡೆದಿವೆ. 

ಎಲ್ಲ ಚುನಾವಣೆ ನಡೆಯುವಾಗ ಇದಕ್ಕೇಕೆ ತಡೆ ಅಂತ ಶೇಖರಗೌಡ ಮಾಲಿ ಪಾಟೀಲ್ ಅವರು ಹೈಕೋರ್ಟ್ಗೆ ಮೊರೆಹೋಗಿದ್ದರು. ಒಂದೂವರೆ ತಿಂಗಳ ಹಿಂದೆಯೇ ಸರಕಾರಕ್ಕೆ ಚುನಾವಣೆ ನಡೆಸುವಂತೆ ಮನವಿ ಸಲ್ಲಿಸಿದ್ದರೂ, ಸರಕಾರದಿಂದ ಯಾವುದೇ ಸ್ಪಂದನೆ ಬಂದಿಲ್ಲ ಎಂದು ಮಾಲಿ ಪಾಟೀಲ್ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್, 2 ತಿಂಗಳಲ್ಲಿ ಕಸಾಪ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News