ನಂಜನಗೂಡು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

Update: 2021-09-15 13:25 GMT

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಉಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.  

ಕಾಂಗ್ರೆಸ್ ಕಾರ್ಯಕರ್ತ ರಾಜು ಅವರ ಪುತ್ರ ರವಿ ಯಿಂದ ಬಿಜೆಪಿ ಕಾರ್ಯಕರ್ತ ಉದಯರವಿ ಮೇಲೆ  ಮಚ್ಚಿನಿಂದ ಹಲ್ಲೆ  ನಡೆದಿದೆ ಎನ್ನಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಉದಯರವಿ ಅವರನ್ನು ನಂಜನಗೂಡಿನ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಉಚ್ಚಗಣಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಉಚ್ಚಗಣಿ ಮಹದೇವಮ್ಮ ದೇಗುಲ ನಿರ್ವಹಣೆ ಸಂಬಂಧ ನಡೆದಿರುವ ಗಲಾಟೆ ಎರಡೂ ಪಕ್ಷದವರ ವೈಯಕ್ತಿಕ ದ್ವೇಷಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಉಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿರುವ ಸಂಬಂಧ  ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ನಿರ್ಗಮಿಸಿದ ಬಳಿಕ ಈ ಗಲಾಟೆ ಸಂಬಂವಿಸಿದೆ.

ವಿಷಯ ತಿಳಿಯುತಿದ್ದಂತೆ ಉಚ್ಚಗಣಿ ಗ್ರಾಮಕ್ಕೆ ಹುಲ್ಲಹಳ್ಳಿ ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಡುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಎರಡೂ ಗುಂಪಿಪುಗಳ ಸದಸ್ಯರ ಜೊತೆ ಮಾತನಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

ಉಚ್ಚಗಣಿ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಈ ಹಿಂದೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿನ ದ್ವೇಷ ಇದಕ್ಕೆ ಕಾರಣವಾಗಿದೆ.

ಲಕ್ಷ್ಮೀಕಾಂತ್ ತಳವಾರ್, ಸರ್ಕಲ್ ಇನ್ಸ್ ಪೆಕ್ಟರ್, ನಂಜನಗೂಡು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News