ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ದರದಲ್ಲಿ ರಿಯಾಯಿತಿಗೆ ಆಗ್ರಹಿಸಿ ಮನವಿ
ಉಡುಪಿ, ಸೆ.15: ಖಾಸಗಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರವನ್ನು ನೀಡಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಸಿಟಿ ಬಸ್ಗಳಲ್ಲಿ ಸ್ವೀಕರಿಸಲಾಗುವ ಚಲೋ ಕಾರ್ಡ್‌ನಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸನ್ನು ಶೀಘ್ರವಾಗಿ ಆರಂಭಿಸಬೇಕು. ಅಲ್ಲಿಯವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಬಸ್‌ದರದಲ್ಲಿ ಶೇ.50 ರಿಯಾಯಿತಿಯನ್ನು ನೀಡಬೇಕು. ಚಲೋ ಕಾರ್ಡನ್ನು ಎಲ್ಲಾ ಸಿಟಿಬಸ್ಗಳಲ್ಲಿ ಸ್ವೀಕರಿಸಬೇಕು. ವಿದ್ಯಾರ್ಥಿ ರಿಯಾಯಿತಿ ಕಾರ್ಡ್‌ನಲಿ್ಲ ಮಾಸಿಕ ಪಾವತಿ ಮಿತಿಯಲ್ಲಿರಬೇಕು. ಜಿಲ್ಲಾಡಳಿತವು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸರಕಾರಿ ಬಸ್ಸಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಎಸ್ಐಓ ಉಡುಪಿ ಜಿಲ್ಲಾಧ್ಯಕ್ಷ ಅರ್ಬಾಝ್ ಅಹಮದ್, ಜಿಲ್ಲಾ ಕಾರ್ಯದರ್ಶಿ ಅಸ್ಜದ್ ಹೂಡೆ, ಸದಸ್ಯರಾದ ವಸೀಮ್ ಅಬ್ದುಲ್ಲಾ, ಸಯಾನ್ ಮುಂತಾದವರು ಉಪಸ್ಥಿತರಿದ್ದರು.