ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ಸಂತ್ರಸ್ತೆ ಪರ ವಕೀಲೆ ಅನಾರೋಗ್ಯ ಹಿನ್ನೆಲೆ; ವಿಚಾರಣೆ ಮುಂದೂಡಿಕೆ

Update: 2021-09-15 17:23 GMT

ಬೆಂಗಳೂರು, ಸೆ.15: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. 

ಪ್ರಕರಣ ಸಂಬಂಧ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಪೀಠದಲ್ಲಿ ವಿಚಾರಣೆ ನಡೆದಿದ್ದು, ಯುವತಿ ಪರ ಸುಪ್ರೀಂ ಕೋರ್ಟ್ ವಕೀಲೆ ಇಂದಿರಾ ಜೈಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಪರ ಸಿ.ವಿ.ನಾಗೇಶ್ ವಾದ ಮಂಡಿಸುತ್ತಿದ್ದರು.

ಪ್ರಕರಣ ಸಂಬಂಧ ಎಸ್‍ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಎಸ್‍ಐಟಿ ರಚನೆ ಕಾನೂನು ಬದ್ಧವಾಗಿಲ್ಲ ಎಂದು ಯುವತಿ ಪರ ವಕೀಲರು ವಾದ ಮಂಡಿಸಿದ್ದಾರೆ.

ಇದೇ ವೇಳೆ ಅನಾರೋಗ್ಯದ ನಡುವೆಯೂ ವಾದ ಮಂಡಿಸಲು ಮುಂದಾಗಿದ್ದ ವಕೀಲೆ ಇಂದಿರಾ ಜೈಸಿಂಗ್ ಅವರ ಅನಾರೋಗ್ಯ ಪರಿಗಣಿಸಿದ ಹೈಕೋರ್ಟ್, ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿ ಆದೇಶ ಹೊರಡಿಸಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News