ಮಂಗಳೂರು ವಿಶ್ವವಿದ್ಯಾನಿಲಯ: ಸೆ.30ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆ

Update: 2021-09-16 12:26 GMT

ಮಂಗಳೂರು, ಸೆ.16: ಮಂಗಳೂರು ವಿಶ್ವವಿದ್ಯಾನಿಲಯವು ಸೆ.30ರಿಂದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಸರಕಾರ ಸೂಚಿಸಿರುವ ಕೋವಿಡ್ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಗಳಿಗೆ ಹಾಜರಾಗಬಹುದು. ಪರೀಕ್ಷಾ ಶುಲ್ಕ ಮತ್ತು ನೋಂದಣಿಗೆ ಸಂಬಂಧಿಸಿದಂತೆ ಆಯಾಯ ಕಾಲೇಜುಗಳಿಂದ ಮಾಹಿತಿಯನ್ನು ಪಡೆದುಕೊಳ್ಳಬೇಕು.

ಸೆ.27ರಿಂದ 1,3,5,7ನೇ ಸೆಮಿಸ್ಟರ್‌ಗೆ ನಡೆದಿರುವ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರಾರಂಭಿಸಲಾಗುವುದು. ಹಿಂಬಾಕಿ ಇರುವ ವಿದ್ಯಾರ್ಥಿಗಳಿಗೆ, ಕೋವಿಡ್ ಬಾಧಿತರಿಗೆ ಹಾಗೂ ಪ್ರಯಾಣದ ತೊಂದರೆ ಉಂಟಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರ ಕಚೇರಿಯ ದೂ.ಸಂ: 0824-2287327, 2287659, 2284359 ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News