ದ.ಕ. ಜಿಲ್ಲೆ : ಕೋವಿಡ್‌ಗೆ 2 ಬಲಿ, 186 ಮಂದಿಗೆ ಕೊರೋನ ಸೋಂಕು
Update: 2021-09-16 20:36 IST
ಮಂಗಳೂರು, ಸೆ.16: ದ.ಕ. ಜಿಲ್ಲೆಯಲ್ಲಿ ಗುರುವಾರ 186 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯ ಪಾಸಿಟಿವಿಟಿ ದರ ಶೇ.1.65ರಷ್ಟಿದೆ. ಜಿಲ್ಲೆಯಲ್ಲಿ ಈವರೆಗೆ 17,20,346 ಮಂದಿಯನ್ನು ಕೋವಿಡ್ ತಪಾಸಣೆಗೊಳಪಡಿಸಲಾಗಿದೆ. ಆ ಪೈಕಿ 16,07,510 ಮಂದಿಯ ವರದಿ ನೆಗೆಟಿವ್ ಆಗಿದ್ದು, 1,12,836 ಮಂದಿಯ ವರದಿ ಪಾಸಿಟಿವ್ ಆಗಿದೆ.
ಗುರುವಾರ 173 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 1,09,780ಕ್ಕೇರಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 1,626ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 1430 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿ ಈವರೆಗೆ 87,191 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ 1,06,11,770 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.