ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ: ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ

Update: 2021-09-16 16:27 GMT

ಉಡುಪಿ, ಸೆ.16: ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿ ರುವ ಕುರಿತಂತೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತರ ಸೂಚನೆಯಂತೆ, ಮಂಗಳೂರಿನ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ನೇತೃತ್ವದಲ್ಲಿ, ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಗದೀಶ್ ಎಂ, ಪೊಲೀಸ್ ನಿರೀಕ್ಷಕ ಜಯರಾಮ ಡಿ ಗೌಡ, ರಾಜಶೇಖರ ಎಲ್ ಹಾಗೂ ಸಿಬ್ಬಂದಿಗಳು ಇಂದು ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಂಡದ ಸದಸ್ಯರು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂಜಿಬೆಟ್ಟಿನ ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜು, ಇಂದ್ರಾಳಿಯ ಪ್ರಾಥಮಿಕ ಶಾಲೆ, ಉಡುಪಿಯ ಸರಕಾರಿ ಬೋರ್ಡ್ ಹೈಸ್ಕೂಲ್‌ಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲಾ ಭೇಟಿ ವೇಳೆ, ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸೇಶನ್ ಮಾಡುವುದು ಮತ್ತು ಮನೆಯಿಂದಲೇ ಬಿಸಿನೀರು ಮತ್ತು ಆಹಾರ ಪದಾರ್ಥ ಗಳನ್ನು ತರುವ ಬಗ್ಗೆ ಮತ್ತು ಶಾಲೆಯಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಜಾಗೃತಿ ಮೂಡಿಸಲಾಯಿತು.

ಸರಕಾರದ ಮಾರ್ಗಸೂಚಿಯಂತೆ ಎಲ್ಲಾ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ-ಕಾಲೇಜು ಮುಖ್ಯಸ್ಥರಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಸೂಚನೆಗಳನ್ನು ನೀಡಿದರು.

ಸರಕಾರದ ಮಾರ್ಗಸೂಚಿಯಂತೆ ಎಲ್ಲಾ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ-ಕಾಲೇಜು ಮುಖ್ಯಸ್ಥರಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಸೂಚನೆಗಳನ್ನು ನೀಡಿದರು. ರಾಜ್ಯದ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ಉಡುಪಿ ಜಿಲ್ಲೆಯ ಭೇಟಿ ವೇಳೆ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಲಿದ್ದು, ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು ಸರ್ಕಾರದ ಸುತ್ತೋಲೆಯಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಕೋವಿಡ್ ನಿಯಮ ಪಾಲಿಸುವಂತೆ ಅವರು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News