×
Ad

ಪ್ರತಿಭಟನಕಾರರ ವಿರುದ್ಧ ಪ್ರಕರಣ ದಾಖಲು

Update: 2021-09-16 22:09 IST

ಉಡುಪಿ, ಸೆ.16: ಪ್ರತಿಭಟನೆ ನಡೆಸಲು ಯಾವುದೇ ಅನುಮತಿ ಪಡೆಯದೇ ಸೆ.14ರಂದು ಸಂಜೆ 4:45ರ ಸುಮಾರಿಗೆ ಉಡುಪಿ ಬೋರ್ಡ್ ಹೈಸ್ಕೂಲ್ ಎದುರು 200ರಿಂದ 300 ಮಂದಿ ಸೇರಿ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗುತ್ತಾ ಜಾಥಾದೊಂದಿಗೆ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ಸಾಗಿದ ಹಾಗೂ ಉಡುಪಿ ನಗರ ಠಾಣೆಯ ಪಿಎಸ್‌ಐ ಅಶೋಕ್‌ ಕುಮಾರ್ ಅವರ ಸೂಚನೆಯನ್ನು ಉಲ್ಲಂಘಿಸಿದ ಎಸ್‌ಡಿಪಿಐನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಗೂ ಸದಸ್ಯ ಅಬ್ದುಲ್ ಬಶೀರ್ ಸೇರಿದಂತೆ 35 ಮಂದಿ ಪ್ರತಿಭಟಕಾರರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News