ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಸಿಎಂ ಬೊಮ್ಮಾಯಿ ಭರವಸೆ

Update: 2021-09-17 17:18 GMT

ಕಲಬುರಗಿ: ಸಮಗ್ರ ಕರ್ನಾಟಕದ ಅಭಿವೃದ್ಧಿ ಜೊತೆಗೆ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಇಂದು ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈ.ಕ. ಭಾಗವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ ಕೀರ್ತಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೆ ಎಂದು ಹೇಳಿದರು. ಇದೇ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಅವರು, ನವ ಭಾರತ ನಿರ್ಮಾಣದ ಸರ್ಕಾರದ ಸಂಕಲ್ಪಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಸುಭಾಷ ಗುತ್ತೇದಾರ, ರಾಜಕುಮಾರ ಪಾಟೀಲ ತೆಲ್ಕೂರ, ಶಶೀಲ ಜಿ.‌ನಮೋಶಿ, ಬಿ.ಜಿ. ಪಾಟೀಲ, ಮುಖಂಡರಾದ ಅಮರನಾಥ ಪಾಟೀಲ, ಚಂದು ಪಾಟೀಲ, ಕಲ್ಯಾಣ ಕರ್ನಾಟಕ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಅನೇಕರು ಇದ್ದರು. ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಅವರು ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News