×
Ad

ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ ಮುಸ್ಲಿಂ ಒಕ್ಕೂಟ ಕಾರ್ಕಳ ಘಟಕ ವತಿಯಿಂದ ಮನವಿ

Update: 2021-09-17 12:43 IST

ಕಾರ್ಕಳ : ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಿಂಸೆ, ಅತ್ಯಾಚಾರ ಖಂಡಿಸಿ, ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕಾರ್ಕಳ ತಾಲ್ಲೂಕು ಘಟಕ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕಾರ್ಕಳ ತಾಲೂಕು ಧಂಡಾದಿಕಾರಿ ಪ್ರಕಾಶ್ ಎಸ್ ಮರಬಳ್ಳಿ ಮುಖಾಂತರ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಮುಸ್ಲಿಂ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಮೊಹಮ್ಮದ್ ಶರೀಫ್, ಕಾರ್ಯದರ್ಶಿ ಅಬ್ದುಲ್ ರಶೀದ್, ಕೋಶಾಧಿಕಾರಿ ಸಯ್ಯದ್ ಅಬ್ಬಾಸ್, ಕಾರ್ಕಳ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಶ್ಫಾಕ್ ಅಹ್ಮದ್, ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಕಳ ತಾಲೂಕು ಅಧ್ಯಕ್ಷ ನಾಸಿರ್ ಶೇಖ್, ನಿವೃತ್ತ ಗ್ರಾಮಲೆಕ್ಕಿಗ ಸುಲೈಮಾನ್, ಸದಸ್ಯರಾದ ಹಸನ್ ನಿಟ್ಟೆ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News