ನಮ್ಮ ದೇವಾಲಯಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-09-17 12:02 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ: ಅನಧಿಕೃತ ದೇವಸ್ಥಾನ ತೆರವು ವಿಚಾರವಾಗಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸ್ಪಷ್ಟ ನಿರ್ದೇಶನ ನೀಡುವವರೆಗೆ ಯಾರೂ ಕೂಡ ಅವಸರದಲ್ಲಿ ದೇವಾಲಯ ತೆರವು ಮತ್ತು ಧಕ್ಕೆ ಮಾಡಬಾರದು ಎಂದು ಅಧಿಕಾರಿಗಳಿಗೆ ಈಗಾಗಲೇ ಸ್ಪಷ್ಟ ನಿರ್ದೇಶನ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾರು ಕೂಡ ಅವಸರದಲ್ಲಿ ದೇವಾಲಯಗಳನ್ನು ತೆಗೆಯಬಾರದು ಮತ್ತು ದಕ್ಕೆ ಮಾಡಬಾರದು. ಈ ವಿಷಯವಾಗಿ ಈಗಾಗಲೇ ಸಂಬಂದಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೆಶನ ನೀಡಿದ್ದು, ನಮ್ಮ ಅಸ್ಮಿತೆ, ಧರ್ಮದ, ದೇವಾಲಯಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಈ ವಿಚಾರದ ಬಗ್ಗೆ ಗಂಭೀರ ಚಿಂತನೆ ಮಾಡುತ್ತಿದ್ದೇವೆ. ಕೂಡಲೇ ಈ ಬಗ್ಗೆ ಪರಿಹಾರ ಕಂಡು ಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ್ ನಿರಾಣಿ, ಮುನಿರತ್ನ, ದತ್ತಾತ್ರೇಯ ಪಾಟೀಲ್ ರೇವೂರ, ಸುಭಾಷ್ ಗುತ್ತೇದ್ದಾರ್, ರಾಜಕುಮಾರ್ ಪಾಟೀಲ್ ತೇಲ್ಕೂರ, ಬಸವರಾಜ್ ಮತ್ತಿಮೂಡ್, ಶಶೀಲ್ ಜಿ ನಮೋಶಿ, ಸಿದ್ದಾಜಿ ಪಾಟೀಲ್, ದೊಡ್ಡಗೌಡಪ್ಪ ಪಾಟೀಲ್ ನರಿಬೋಳ್ ಸೇರಿದಂತೆ ಹಲವರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News