ಜೆಇಇ, ನೀಟ್ ಪ್ರವೇಶ ಪರೀಕ್ಷೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ
Update: 2021-09-17 19:00 IST
ಉಡುಪಿ, ಸೆ.17: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ತರಬೇತಿ ನೀಡಲು ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.
ವೆಬ್‌ಸೈಟ್ - www.sw.kar.nic.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820- 2574892ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.