ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್‍ಸೂದ್

Update: 2021-09-17 13:56 GMT

ಬೆಂಗಳೂರು, ಸೆ.17: ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಅವರು ಸಲ್ಲಿರುವ ಸ್ವಯಂ ನಿವೃತ್ತಿ ಅರ್ಜಿಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕೋರಿಕೆ ಅರ್ಜಿಗೆ ತಡೆ ನೀಡದೆ, ರಾಜ್ಯ ಸರಕಾರದ ಗೃಹ ಇಲಾಖೆಗೆ ಕಡತ ರವಾನೆ ಮಾಡಲಾಗಿದೆ. ಇನ್ನು ರಾಜ್ಯ ಸರಕಾರದ ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.

ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990ನೆ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ಸದ್ಯ ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News